ಬೆಂಗಳೂರು,ಜನವರಿ,1,2026 (www.justkannada.in): ಹೊಸ ವರ್ಷದ ದಿನವೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಲಕಿಯೊಬ್ಬಳು ತನಗೆ ತಂದೆ ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲೇಖನಾ (17) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕಿ.
ಲೇಖನಾ ಹತ್ತನೆ ತರಗತಿ ಅನುತ್ತೀರ್ಣಳಾಗಿದ್ದು ಮನೆಯಲ್ಲಿಯೇ ವಾಸವಾಗಿದ್ದಳು. ಈ ಮಧ್ಯೆ ಕೌಟುಂಬಿಕ ಕಲಹದಿಂದಾಗಿ ತಂದೆ-ತಾಯಿ ದೂರಾಗಿದ್ದರು. ತಂದೆ ಬೇರೆ ಕಡೆ ವಾಸವಾಗಿದ್ದರೆ, ಲೇಖನಾ ತಾಯಿ ಜೊತೆ ಇದ್ದಳು. ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ಒಂಟಿ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಲೇಖನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಸಿ.ಕೆ.ಅಚ್ಚುಕಟ್ಟು ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: girl, commits suicide, not, getting, parents love







