ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 14 ವರ್ಷದ ಬಾಲಕಿ ಸ್ಥಳದಲ್ಲೇ ಸಾವು.

ಬೆಂಗಳೂರು,ಮಾರ್ಚ್,21,2022(www.justkannada.in):  ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳದ ಬಳಿ ನಡೆದಿದೆ.

ಹೆಬ್ಬಾಳ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸ್ಟೆಲ್ಲ ಮೇರಿಸ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಅಕ್ಷಯಾ(14) ಮೃತಪಟ್ಟ ವಿದ್ಯಾರ್ಥಿನಿ. ಬಿಬಿಎಂಪಿ ಕಸದ ಲಾರಿ ಡಿಕ್ಕಿ ವೇಳೆ ಮೂವರಿಗೆ ಗಾಯಗಳಾಗಿದ್ದು  ಗಾಯಾಳುಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಕುರಿತು ಆರ್ ಟಿ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಡರ್ ಪಾಸ್ ನಲ್ಲಿ ಮಳೆಯಿಂದಾಗಿ ನೀರು ನಿಂತಿದ್ದ ಪರಿಣಾಮ ಅಂಡರ್ ಪಾಸ್ ಬಳಸದೇ ಬಾಲಕಿ ಹಾಗೂ ಮೂವರು  ರಸ್ತೆ ದಾಟುತ್ತಿದ್ದರು . ಈ ವೇಳೆ ಮುಂದೆ ಬೈಕ್ ಮತ್ತು ಕಾರ್ ಗಳನ್ನು ನಿಲ್ಲಿಸಿದ್ದರು. ಆದರೆ ಅದರ ಹಿಂಬದಿಯಲ್ಲಿ ವೇಗವಾಗಿ ಬಂದ ಬಿಬಿಎಂಪಿ ಲಾರಿ ವಿದ್ಯಾರ್ಥಿನಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

Key words: girl –death-BBMP – lorry