ಚಾಕೊಲೇಟ್ ತಿನ್ನುವ ವೇಳೆ ಉಸಿರುಗಟ್ಟಿ ಬಾಲಕಿ ಸಾವು.

ಉಡುಪಿ,ಜುಲೈ,20,2022(www.justkannada.in):  ಚಾಕೊಲೇಟ್‌ ತಿನ್ನುವ ವೇಳೆ ಉಸಿರುಗಟ್ಟಿ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ  ಈ ಘಟನೆ ನಡೆದಿದೆ. ಸಮನ್ವಿ(6) ಮೃತಪಟ್ಟ ಬಾಲಕಿ. ಸಮನ್ವಿ ಉಪ್ಪುಂದದ ಆಂಗ್ಲ ಮಾಧ್ಯಮ ಶಾಲೆಯೊಂದರ ವ್ಯಾಸಂಗ ಮಾಡುತ್ತಿದ್ದು, ಶಾಲಾ ಬಸ್‌ ಗೆ ಕಾಯುತ್ತಿದ್ದಾಗ ಚಾಕೊಲೇಟ್‌ ತಿಂದಿದ್ದಾಳೆ. ಈ ವೇಳೆ ಬಾಲಕಿ ಚಾಕಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದೆ.

ಸಮನ್ವಿ ಶಾಲೆಗೆ ಹೋಗಲ್ಲ ಎಂದು ಹಠ ಮಾಡುತ್ತಿದ್ದಳು. ಹೀಗಾಗಿ ಪೋಷಕರು ಚಾಕಲೇಟ್ ಕೊಟ್ಟು ಶಾಲೆಗೆ ಹೋಗಲು ಒಪ್ಪಿಸಿದ್ದಾರೆ. ಬಾಲಕಿ ಚಾಕಲೇಟ್ ಬಾಯಲಿಟ್ಟುಕೊಂಡು ತಾಯಿ ಕೈಹಿಡಿದು ಹೋಗಿ, ಶಾಲಾ ಬಸ್ ಹತ್ತಿಸುತ್ತಿದ್ದಂತೆ ಬಾಲಕಿ ಕುಸಿದು ಬಿದ್ದಿದ್ದಾಳೆ. ಬಾಲಕಿ ಬೀಳುತ್ತಿದ್ದಂತೆ ಬಾಯಿಂದ ಚಾಕಲೇಟ್ ಹೊರಗೆ ಬಿದ್ದಿದೆ. ನಂತರ ಆಸ್ಪತ್ರೆ ಸಾಗಿಸುವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಈ ಕುರಿತು ಬೈಂದೂರು ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Key words: Girl -died – while- eating- chocolate-udupi