Sunday, August 2, 2026

BDA Apartments

Home Front Page 15 ದಿನದೊಳಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ

15 ದಿನದೊಳಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ

ತುಮಕೂರು,ಸೆಪ್ಟಂಬರ್,2,2021(www.justkannada.in): ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ‘ ಉದ್ಯೋಗ ಕ್ರಾಂತಿಗೆ’ ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ  15 ದಿನದೊಳಗೆ ದಿನಾಂಕ ನಿಗಧಿಪಡಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದರು.

ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.

ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು. 15 ದಿನದೊಳಗೆ 2022 ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗಧಿ ಮಾಡುವುದಾಗಿ ಹೇಳಿದರು.

ದೇಶ-ವಿದೇಶ ಗೆಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಅಹ್ವಾನ ಮಾಡುವ ಮೂಲಕ 2022 ರಲ್ಲಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗುವುದು. ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು. ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದರು.

2011- 2012 ರಲ್ಲಿ ಬೃಹತ್ ಕೈಗಾರಿಕಾ ಆಂದೋಲನ ನೆಡೆಸಿ ವಿವಿಧ ದೇಶಗಳಿಂದ ಉದ್ಯಮಿಗಳಿ ಅಹ್ವಾನ ನೀಡಿದ್ದೇವು. ಆಗಾ ಸಾವಿರಾರು ಉದ್ಯೋಗಿಗಳಿಗೆ ಕೆಲಸ ಸಿಕ್ಕಿದೆ. ಈ ಬಾರಿಯೂ ‘ಉದ್ಯೋಗ ಸೃಷ್ಟಿಗೆ’ ಮೊದಲ ಆದ್ಯತೆ ಎಂದು ಹೇಳಿದರು.

ಇಲ್ಲಿನ ಪುಡ್ ಪಾಕ್೯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಕೆಲಸವನ್ನು ಮಾಡುತ್ತಿದ್ದಾರೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಸುಮಾರು 105 ಎಕರೆ ಪ್ರದೇಶದಲ್ಲಿ ಪುಡ್ ಪಾರ್ಕ್ ಕೈಗಾರಿಕಾ ವಿಸ್ತರಣೆ ಹೊಂದಿದೆ ರೂ. 1000 ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ದೇಶ- ವಿದೇಶಗಳಿಂದ ಅನೇಕ ಕಂಪನಿಗಳು ‌ಬಂದಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಲಾಭವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಪುಡ್ ಪಾಕ್೯ನಲ್ಲಿ ಸ್ಥಳೀಯರಿಗೆ ನೀಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ನಿರಾಣಿ ಅವರು, ಡಾ.ಸರೋಜಿನಿ ಮಹಿಷಿ ಅವರ ವರದಿಯ ಪ್ರಕಾರ ಸ್ಥಳೀಯರಿಗೆ ಶೇ 80 ರಷ್ಟು ಉದ್ಯೋಗಗಳನ್ನು ನೀಡಬೇಕು.

ಒಂದು ವೇಳೆ ಯಾವುದಾದರೂ ಲೋಪದೋಷಗಳು ಉಂಟಾಗಿದ್ದರೆ ಸಂಬಂಧಪಟ್ಟ ‌ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸ್ಪಷ್ಟನೆ ನೀಡಿದರು.

ಈ ಸಂದರ್ಭದಲ್ಲಿ ವಿಶೇಷ ಜಿಲ್ಲಾಧಿಕಾರಿ  ಡಾ.ಶಿವರಾಂ.ಬಂಡಾರಿ, ಕೆ ಐ.ಡಿ.ಬಿ.ಯ ಸಿಇಒ  ಎನ್ ಶಿವಶಂಕರ್‌, ಮುಖ್ಯ ಅಭಿವೃದ್ಧಿ ಅಧಿಕಾರಿ ಬಿ.ಕೆ.ಪವಿತ್ರ,  ಹಿರಿಯ ಅಧಿಕಾರಿ ತಪ್ಸಮಾ ಜಹೇರಾ ಸೇರಿದಂತೆ ಹಲವಾರು  ಉಪಸ್ಥಿತರಿದ್ದರು.

Key words: global- investor –conference- within- 15 days-date fix- Minister -Murugesh Nirani.