2021ರ ಜನವರಿಗೆ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಮುಂಬೈ, ಸೆಪ್ಟೆಂಬರ್ 25, 2020 (www.justkannada.in): ಗೋವಾದಲ್ಲಿ ನಡೆಯಬೇಕಿದ್ದ 51ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್‌ಎಫ್‌ಐ) ವನ್ನು ಮುಂದೂಡಲಾಗಿದೆ.

ನವೆಂಬರ್ 20 ರಿಂದ 28 ರ ವರೆಗೆ ನಡೆಯಬೇಕಿದ್ದ ಚಿತ್ರೋತ್ಸವ ಜನವರಿ 2021 ಕ್ಕೆ ಮುಂದೂಡಿಕೆಯಾಗಿದೆ. ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲಾಗಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಅಧಿಕಾರಿಗಳು ಕೂಡ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಚರ್ಚಿಸಿದ ನಂತರ ಚಲನಚಿತ್ರೋತ್ಸವ ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಕಾಶ್ ಹೇಳಿದ್ದಾರೆ.