ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಹೋಗಿದ್ದು ಸರಿಯಲ್ಲ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದಿಂದಲೇ ಆಕ್ಷೇಪ…

ಬೆಂಗಳೂರು,ಫೆ,29,2020(www.justkannada.in):  ಕಳೆದ ಎರಡು ದಿನಗಳ ಹಿಂದಷ್ಟೆ ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೋಗಿದ್ದು ವಿಶೇಷ…

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ, ಸಿಎಂ ಬಿಎಸ್ ಯಡಿಯೂರಪ್ಪ ಬಗ್ಗೆ ಗುಣಗಾನ ಮಾಡಿದ್ದರು. ಈ ನಡುವೆ ಈ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಹೋಗಿದ್ದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ.

ಹೌದು, ಕಾಂಗ್ರೆಸ್ ಕಿಸಾನ್ ಘಟನದ ಅಧ್ಯಕ್ಷರಾದ ಸಚಿನ್ ಮಿಗಾ ಅವರು ಸಿದ್ಧರಾಮಯ್ಯ ನಡೆಗೆ  ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಹೋಗಿದ್ದು ಸರಿಯಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ  ಭವಿಷ್ಯದಲ್ಲಿ ಪುನಾರಾವರ್ತನೆಯಾಗದಂತೆ ನೋಡಿಕೊಳ್ಳಿ  ಎಂದು ಸಲಹೆ ನೀಡಿದ್ದಾರೆ.

Key words: Going – CM BSY- birthday- program -not okay-former cm- Siddaramaiah-congress