Wednesday, August 5, 2026

BDA Apartments

Home Front Page ಸಮ್ಮಿಶ್ರ ಸರ್ಕಾರದ 2ನೇ ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ…

ಸಮ್ಮಿಶ್ರ ಸರ್ಕಾರದ 2ನೇ ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ…

ಬೆಂಗಳೂರು,ಜು,1,2019(www.justkannada.in): ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಶಾಕಿಂಗ್ ಸುದ್ದಿ.ಕಾಂಗ್ರೆಸ್  ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೆ ಇದೀಗ ಮತ್ತೊಬ್ಬ ಕೈ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳಗಾವಿಯ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೈಬರಹದಲ್ಲಿ ಬರೆದ ರಾಜೀನಾಮೆ ಪತ್ರವನ್ನ ಸ್ಪೀಕರ್ ಗೆ ರವಾನಿಸಿ ರಮೇಶ್ ಜಾರಕಿಹೊಳಿ ನವದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಸ್ಪೀಕರ್ ಭೇಟಿ ಮಾಡದೇ ರಾಜೀನಾಮೆ ಪತ್ರ ರವಾನಿಸಿದ್ದು ನಾಳೆ ಸ್ಪೀಕರ್ ಭೇಟಿಯಾಗಿಲಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ರಮೇಶ್ ಜಾರಕಿಹೊಳಿ ಅಂದಿನಿಂದಲೂ ರಾಜೀನಾಮೆ ಬಗ್ಗೆ ಪ್ರಸ್ತಾಪಿಸುತ್ತಲೇ ಇದ್ದರು. ಇದೀಗ ಆನಂದ್ ಸಿಂಗ್ ರಾಜೀನಾಮೆ ಬಳಿಕ ತಾವೂ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಮ್ಮಿಶ್ರ ಸರ್ಕಾರದ 2ನೇ ವಿಕೆಟ್ ಪತನವಾಗಿದೆ.

Key words: gokaka-congress-mla-Ramesh jarakiholi –resigns