Sunday, August 23, 2026

BDA Apartments

Home Crime ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ: ಕೋಟ್ಯಾಂತರ ರೂ.ಮೌಲ್ಯದ ಚಿನ್ನ ದೋಚಿದ ಕಳ್ಳರು

ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ: ಕೋಟ್ಯಾಂತರ ರೂ.ಮೌಲ್ಯದ ಚಿನ್ನ ದೋಚಿದ ಕಳ್ಳರು

ಚಾಮರಾಜನಗರ,ನವೆಂಬರ್,22,2025 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ ನಡೆದಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ರಾಬರಿ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ದುಷ್ಕರ್ಮಿಗಳು ಕೋಟ್ಯಾಂತರ ರೂ. ಮೌಲ್ಯದ 1.2 ಕೆಜಿ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಬಂಡೀಪುರ ಕಾಡಿನೊಳಗೆ  ಚಿನ್ನದ ವ್ಯಾಪಾರಿಯ ವಾಹನಕ್ಕೆ ಹಿಂಭಾಗ ಮತ್ತು ಮುಂಭಾಗದಲ್ಲಿ ಢಿಕ್ಕಿ ಹೊಡೆದು ಕಾರು ನಿಲ್ಲಿಸಿದ್ದು, ನಂತರ ಖದೀಮರು ಕಾರಿನಿಂದ ಇಳಿದು ಬಂದು, ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.  ನಂತರ ಕಾರಿನಲ್ಲಿದ್ದ 1.2 ಕೆಜಿ ಚಿನ್ನವನ್ನು ಕದ್ದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

ಘಟನೆಯ  ಬಳಿಕ ಗುಂಡ್ಲುಪೇಟೆ ಠಾಣೆಗೆ ದೂರು ಸಲ್ಲಿಸಿದ್ದು ಸದ್ಯ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವ್ಯಾಪಾರಿ ಕೇರಳ ಮೂಲದವರು ಎನ್ನಲಾಗಿದೆ.

Key words: Gold, merchant, Thieves, steal, gold, Chamarajanagar