Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Crime ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಗೆಳೆಯ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ  

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಗೆಳೆಯ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ  

ಬೆಂಗಳೂರು ,ಮಾರ್ಚ್,14,2025 (www.justkannada.in): ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ರನ್ಯಾ ಗೆಳೆಯ 2ನೇ ಆರೋಪಿ ತರುಣ್ ರಾಜು ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ತರುಣ್ ರಾಜುವನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದಿದ್ದರು.  ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣ ರಾಜುವನ್ನು ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ   ನ್ಯಾಯಾಂಗ ಬಂಧನ ವಿಧಿಸುವಂತೆ ಮನವಿ ಮಾಡಿದ್ದರು.

ನ್ಯಾಯಾಧೀಶರಾದ ವಿಶ್ವನಾಥ್ ಸಿಗೌಡರ್  ಅವರು  ಆರೋಪಿ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ನಟಿ ರನ್ಯಾರಾವ್ 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ.

Key words: Ranya Rao,  Gold smuggling case, Tarun Raju, judicial custody