Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Cinema ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾದ ಗೋಲ್ಡನ್ ಸ್ಟಾರ್ ಅಭಿನಯದ ‘ಬಾನದರಿಯಲ್ಲಿ’ !

ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾದ ಗೋಲ್ಡನ್ ಸ್ಟಾರ್ ಅಭಿನಯದ ‘ಬಾನದರಿಯಲ್ಲಿ’ !

ಬೆಂಗಳೂರು, ನವೆಂಬರ್ 11, 2023 (www.justkannada.in): ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬಾನದರಿಯಲ್ಲಿ’ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಗಣೇಶ್ ಕ್ರಿಕೆಟಿಗನಾಗಿ ನಟಿಸಿದ್ದರೆ, ಅವರೊಂದಿಗೆ ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ಕೂಡ ನಟಿಸಿದ್ದಾರೆ. ಈ ಚಿತ್ರವು ಪ್ರೀತಂ ಜೊತೆ ಗಣೇಶ್ ಅವರ ನಾಲ್ಕನೇ ಚಿತ್ರವಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಜೋಡಿಯ ಈ ಸಿನಿಮಾ ಸಿನಿಪ್ರಿಯರಿಂದ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು.

ಅಂದಹಾಗೆ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಮತ್ತು 99 ಸಿನಿಮಾದಲ್ಲಿ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಒಟ್ಟಾಗಿ ಕೆಲಸ ಮಾಡಿದ್ದರು.

ಚಿತ್ರಕ್ಕೆ ಛಾಯಾಗ್ರಾಹಕಿ ಪ್ರೀತಾ ಜಯರಾಮನ್ ಕಥೆ ಬರೆದಿದ್ದು, ಪ್ರೀತಂ ಚಿತ್ರಕಥೆ, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.