ಬೆಂಗಳೂರು,ಜೂನ್,25,2025 (www.justkannada.in): ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.
ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.
Key words: Good news, artists, government, increase