ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ…

ಮೈಸೂರು,ಜೂ,13,2020(www.justkannada.in): ಪೊಲೀಸ್ ಹುದ್ದೆ‌‌ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ಲಾಕ್ ಡೌನ್ ಮತ್ತೆ ಜೀವ ತುಂಬಿದೆ. ಹೌದು ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಪೊಲೀಸ್ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು,  ಈ ಹಿನ್ನೆಲೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಈ ತಿಂಗಳ 22 ರವರೆಗೆ ಮಾತ್ರವೇ ಅರ್ಜಿ ಸಲ್ಲಿಸುವ ಕಡೆಯ ದಿನಾಂಕವಾಗಿತ್ತು. ಆದರೆ ಲಾಕ್ ಡೌನ್ ಇದ್ದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.Good news – aspiring- police –posts- Application -Submission Date- Extension.

ಪರಿಷ್ಕೃತ ಆದೇಶದನ್ವಯ ಅರ್ಜಿ ಸಲ್ಲಿಸಲು ಆಗಸ್ಟ್ 7 ರವರೆಗೆ ಕಾಲಾವಕಾಶವಿದೆ. ಕೇವಲ ದಿನಾಂಕವಷ್ಟೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದ್ದು ಇನ್ನುಳಿದಂತೆ ಯಥಾಪ್ರಕಾರ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ.

Key words: Good news – aspiring- police –posts- Application -Submission Date- Extension.