Tuesday, October 6, 2026

BDA Apartments

immense respect BDA JK_Adv BDA Adv
Home Front Page ಗುಡ್ ನ್ಯೂಸ್: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ

ಗುಡ್ ನ್ಯೂಸ್: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ

ಬೆಂಗಳೂರು, ಫೆಬ್ರವರಿ 14, 2022 (www.justkannada.in): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿಯುತ್ತಿದೆ.

ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುಡ್ ನ್ಯೂಸ್: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ mystaxismall2_old mystaxismall2

ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,78,882 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 91,930 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,16,77,641 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.