Monday, September 21, 2026

BDA Apartments

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ BDA JK_Adv BDA Adv
Home Front Page ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಆಗಸ್ಟ್ 10, 2021 (www.justkannada.in): ರಾಜ್ಯದಲ್ಲಿ ಒಂದು ದಿನದಲ್ಲಿ 1186 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36817 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ. ಒಟ್ಟು 2859552 ಸೋಂಕಿತರು ಗುಣಮುಖರಾಗಿದ್ದು. 23316 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 296 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230782ಕ್ಕೆ ಏರಿಕೆಯಾಗಿದೆ.