ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ !

ಬೆಂಗಳೂರು, ಜೂನ್ 01, 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಹೌದು. ದರ್ಶನ್ ಅಭಿನಯದ ‘ರಾಜವೀರ ಮದಕರಿ ನಾಯಕ’ ಚಿತ್ರೀಕರಣಕ್ಕೆ ಚಿತ್ರತಂಡ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿಯೇ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ಈಗಾಗಲೇ ಕೇರಳದಲ್ಲಿ 20 ದಿನಗಳ ಚಿತ್ರೀಕರಣ ಮುಗಿಸಿದ್ದು ಐತಿಹಾಸಿಕ ಚಿತ್ರದ ಎರಡನೇ ಹಂತದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆಯಬೇಕಿತ್ತು. ಲಾಕ್ಡೌನ್ ಕಾರಣದಿಂದ ರಾಜಸ್ಥಾನದ ಬದಲಿಗೆ ಬೆಂಗಳೂರು ಮತ್ತು ಸುತ್ತಮುತ್ತ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.

ಸರ್ಕಾರದಿಂದ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗುವುದು ಎಂದು ಚಿತ್ರ ತಂಡ ಹೇಳಿಕೊಂಡಿದೆ.