ಗಣೇಶ ಹಬ್ಬದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ದಚ್ಚು !

ಬೆಂಗಳೂರು, ಸೆಪ್ಟೆಂಬರ್ 10, 2021 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಈ ಹಿಂದೆ ಘೋಷಿಸಿದಂತೆ ಗಣೇಶ  ಹಬ್ಬದಂದು ದಚ್ಚು ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಚಿತ್ರಕ್ಕೆ ‘ಕ್ರಾಂತಿ’ ಎಂಬ ಹೆಸರಿಟ್ಟಿದ್ದು, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಈ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ.

ಚಿತ್ರವನ್ನು ವಿ. ಹರಿಕೃಷ್ಣ ನಿರ್ದೇಶಿಸುತ್ತಿದ್ದು, ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣ ಮಾಡಲಿದ್ದಾರೆ.

ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಲ್ಲೂ ಈ ಸಿನಿಮಾ ಬಿಡುಗಡೆಯಾಗಲಿದೆ. ದರ್ಶನ್ ಈ ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

key words: Good news for darshan fans on Ganesh festival day