ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷೆಗಳಿಗೆ‌‌ ಗುಡ್ ನ್ಯೂಸ್ !

ಬೆಂಗಳೂರು, ‌ಡಿಸೆಂಬರ್ 17, 2013 (www.justkannada.in): ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಪಕ್ಷದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ಮೊದಲ ಕಂತಿನಲ್ಲಿ 25 ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ತಿನ ಸದಸ್ಯರಿಗೆ ಅಧಿಕಾರ ಭಾಗ್ಯ ಸಿಗುವ ಸಾಧ್ಯತೆಗಳಿವೆ.

ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಬಹುದಾದ 25 ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ತಿನ ಸದಸ್ಯರ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ಗೆ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ನೇಮಕ ವಿಳಂಬ ಹಿನ್ನೆಲೆಯಲ್ಲಿ ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವುದನ್ನು ಅರಿತ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಅಂತಿಮ ಸುತ್ತಿನ ಮಾತುಕತೆಗೆ ನಿರ್ಧರಿಸಿದ್ದು, ಮುಂದಿನವಾರ ದೆಹಲಿಗೆ ತೆರಳಲು ದಿನಾಂಕ ನಿಗದಿಪಡಿಸಿದ್ದಾರೆ ಎನ್ನಲಾಗಿದೆ.