Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಕೆಪಿಟಿಸಿಎಲ್’ನಿಂದ ಗುಡ್ ನ್ಯೂಸ್! 1899 ಹುದ್ದೆ ನೇಮಕಾತಿ ಪ್ರಕ್ರಿಯೆ ಶುರು

ಕೆಪಿಟಿಸಿಎಲ್’ನಿಂದ ಗುಡ್ ನ್ಯೂಸ್! 1899 ಹುದ್ದೆ ನೇಮಕಾತಿ ಪ್ರಕ್ರಿಯೆ ಶುರು

ಬೆಂಗಳೂರು, ಅಕ್ಟೋಬರ್ 12, 2021 (www.justkannada.in): ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸೋಮವಾರ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ.

ಕೆಪಿಟಿಸಿಎಲ್‌ನ 1899 ಹುದ್ದೆಗಳಿಗೆ ಕಳೆದ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು.

ಕೆಪಿಟಿಸಿಎಲ್‌ನಲ್ಲಿ ಖಾಲಿ ಇರುವ ಇತರ ಹುದ್ದೆಗಳ ಭರ್ತಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ.

key words: Good news from KPTCL, 1899 Appointment process begins