Sunday, September 20, 2026

BDA Apartments

ಪಿಡಿಒಗಳಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್! BDA JK_Adv BDA Adv
Home Front Page ಪಿಡಿಒಗಳಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್!

ಪಿಡಿಒಗಳಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್!

ಬೆಂಗಳೂರು, ಡಿಸೆಂಬರ್ 19, 2021 (www.justkannada.in): ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸಿಹಿಸುದ್ದಿ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಈ ಕುರಿತು ಮಾಹಿತಿ ನೀಡಿದ್ದು, ಪಿಡಿಒಗಳಿಗೆ ಕೇಂದ್ರ ಸ್ಥಾನದಲ್ಲೇ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದಿದ್ದಾರೆ.

ಪಿಡಿಒಗಳ ವಸತಿಗೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗುವುದು. ಇಲಾಖೆಯಿಂದ ಹಣ ಹೊಂದಿಸಲು ಆಗದಿದ್ದರೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಕೋರಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಮೂಲಕ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸಿಹಿಸುದ್ದಿ ವರ್ಷದ ಅಂತ್ಯದಲ್ಲಿ ಸಿಹಿ ಸುದ್ದಿ ನೀಡಿದೆ.