ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶಾಲಾ ವಾಹನ ಖರೀದಿಗೆ ಸರ್ಕಾರ ಅನುಮತಿ.

ಬೆಂಗಳೂರು,ಜುಲೈ,2,2022(www.justkannada.in):  ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಶಾಲೆಗಳಿಗೆ ದೂರದ ಊರುಗಳಿಂದ ಮಕ್ಕಳನ್ನು ಕರೆತರುವ ಸಲುವಾಗಿ ಶಾಲಾ ವಾಹನ ಖರೀದಿಗೆ ರಾಜ್ಯ ಸರ್ಕಾರ  ಅನುಮತಿ ನೀಡಿದೆ.

 ಸರ್ಕಾರಿ ಶಾಲೆಗಳ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರುವುದಕ್ಕೆ ಈ ವ್ಯವಸ್ಥೆ ಮಾಡಲಾಗಿದೆ.  ಈ ಕುರಿತು  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.  ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪರಿಷ್ಕೃತ ಯೋಜನೆಯ ಮಾರ್ಗಸೂಚಿಗಳು 2014ರಲ್ಲಿನ ಅನುಬಂಧ-|||ರಡಿ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಸಲುವಾಗಿ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ವಾಹನಕ್ಕೆ, ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ ವೆಚ್ಚಗಳನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಇತರೆ ಅನುದಾನದಡಿ ವೆಚ್ಚ ಭರಿಸುವಂತೆ ಸೂಚನೆ ನೀಡಲಾಗಿದೆ.

Key words: Good news – government -school –children- school vehicles.

ENGLISH SUMMARY…

Good news for govt. school children: Govt. approves purchase of school vans
Bengaluru, July 2, 2022 (www.justkannada.in): The State Government has given good news to the government school children by giving its consent to purchase school vans to ferry them to the schools.
Bus facilities will be introduced to ferry school children who come from far places. The Deputy Secretary to the Government, Planning, Program Coordination and Statistics Department has issued orders in this regard. The following points have been included in the Annexure-III of the Karnataka MLAs Local Area Development Program’s Revised Plan Guidelines 2014.
Provision has been made to meet the expenses to ferry children studying in government schools, from the Karnaaka MLAs Local Area Development Program. The School Development and Monitoring Committees have been asked to bear the expenses like salaries to driers, petrol, diesel, repair charges from other grants concerned.
Keywords: State Government/ good news/ Govt. school children/ school bus