ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ.

ಬೆಂಗಳೂರು,ಅಕ್ಟೋಬರ್,27,2021(www.justkannada.in):  ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು, ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 3 ರಷ್ಟು ಹೆಚ್ಚಳ ಮಾಡಿದೆ. ತುಟ್ಟಿಭತ್ಯೆಯನ್ನು ಶೇ.21.50 ರಿಂದ ಶೇ.24.50ರವರೆಗೆ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಿಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಗಿಫ್ಟ್ ನೀಡಿದೆ.

ಜುಲೈ 1 ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ನಿವೃತ್ತ ಸರ್ಕಾರಿ ನೌಕರರಿಗೂ ಇದು ಅನುಕೂಲವಾಗಲಿದೆ.

Key words: Good news – state government -employees DA- increase.