Thursday, July 30, 2026

BDA Apartments

Home Front Page ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು,ಜುಲೈ,26,2021(www.justkannada.in): ರಾಜ್ಯ ಸರ್ಕಾರಿ ನೌಕರರಿಗೆ  ಸರ್ಕಾರ ಗುಡ್ ನ್ಯೂಸ್ ನೀಡಿದ್ದು,  ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.jk

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25ರಿಂದ ಶೇ.21.50ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.  ಈ ತುಟ್ಟಿಭತ್ಯೆ ದರಗಳು ಜುಲೈ.1, 2021ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ದಿನಾಂಕ 01-01-2020 ರಿಂದ ದಿನಾಂಕ 30-06-2021ರ ಅವಧಿಯ ಹೆಚ್ಚುವರಿ ತುಟ್ಟಿ ಭತ್ಯೆ ಕಂತುಗಳನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರವು ಹರ್ಷಿಸುತ್ತದೆ. ಅದರಂತೆ 1ನೇ ಜುಲೈ 2021ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನೀಡಲಾಗುವ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 11.25 ರಿಂದ ಶೇಕಡ 21.50ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

Key words: Good news – state government- employees -orders -increase – DA