ಶಿಕ್ಷಕರಿಗೆ ಗುಡ್ ನ್ಯೂಸ್: ಅ.30ರವರೆಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ…

ಬೆಂಗಳೂರು,ಅಕ್ಟೋಬರ್,11,2020(www.justkannada.in):  ಕೊರೋನಾ ಸಂದರ್ಭದಲ್ಲೂ ಶಾಲೆಗೆ ಹೋಗಿ ಕೆಲಸ ಮಾಡುತ್ತಿದ್ದ ಶಿಕ್ಷಕರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಧ್ಯಂತರ ರಜೆ ರದ್ದು ಮಾಡಿದ್ದ ರಾಜ್ಯ ಸರ್ಕಾರ ಇದೀಗ ಶಿಕ್ಷಕರಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.Good news – teachers-State government- order -declare -leave

 ಮಧ್ಯಂತರ ರಜೆ ರದ್ದು ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದರು. ಅಲ್ಲದೇ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸುವಂತೆ ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದರು. ಈ ಬೆನ್ನಲ್ಲೆ ರಾಜ್ಯ ಸರ್ಕಾರ  ಇದೀಗ ಶಿಕ್ಷಕರಿಗೆ ಅಕ್ಟೋಬರ್ 30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ.Good news – teachers-State government- order -declare -leave

ಮಕ್ಕಳು ಮತ್ತು ಶಿಕ್ಷಕರ ಆರೋಗ್ಯ ದೃಷ್ಠಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

Key words: Good news – teachers-State government- order -declare -leave