ಪಂಚರತ್ನ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಜೆಡಿಎಸ್ ಪೂರ್ಣ ಬೆಂಬಲದೊಂದಿಗೆ ಅಧಿಕಾರಕ್ಕೆ- ಹೆಚ್.ಡಿಕೆ ವಿಶ್ವಾಸ.

ಕೋಲಾರ,ನವೆಂಬರ್,23,2022(www.justkannada.in): ಪಂಚರತ್ನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್ ಪೂರ್ಣ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೋಲಾರ ಜಿಲ್ಲೆಯಿಂದಲೇ 2 ಸುನಾಮಿ ಪ್ರಾರಂಭವಾಗಿದೆ.  ಕೋಲಾರ, ಚಿಕ್ಕಬಳ್ಳಾಪುರದ 11 ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ ಎಂದರು.

ಪಂಚರತ್ನ ಕಾರ್ಯಕ್ರಮಕ್ಕೆ  ಒಳ್ಳೆಯ ಬೆಂಬಲ ಸಿಕ್ಕಿದೆ. ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು.  ಜೆಡಿಎಸ್ ಪಕ್ಷದಿಂದ ಯಾರು ಬೇಕಾದರೂ ಸಿಎಂ ಆಗಬಹುದು 1994 ರ ಇತಿಹಾಸ ಮತ್ತೆ ಮರುಕಳಿಸಲಿದೆ ಎಂದು ಹೆಚ್.ಡಿಕೆ ತಿಳಿಸಿದರು.

Key words: Good response – Pancharatna- programme-JDS – power -full support- HDK