ಕಾಂಚನಜುಂಗಾ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಹಲವರಿಗೆ ಗಾಯ.

ಪಶ್ಚಿಮ ಬಂಗಾಳ,17,2024 (www.justkannada.in): ಕಾಂಚನಜುಂಗಾ ಎಕ್ಸ್‌ ಪ್ರೆಸ್‌  ರೈಲಿಗೆ ಗೂಡ್ಸ್ ರೈಲು ಡಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ನಡೆದಿದೆ.

ಕಾಂಚನಜುಂಗಾ ಎಕ್ಸ್‌ ಪ್ರೆಸ್‌  ರೈಲಿಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ ಪ್ರೆಸ್‌ ನ ಎರಡು ಬೋಗಿಗಳು ಹಳಿತಪ್ಪಿದ್ದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದಲ್ಲಿ ಮೂರು ಬೋಗಿಗಳು ತೀವ್ರವಾಗಿ ಜಖಂಗೊಂಡಿವೆ ಎಂದು ಹೇಳಲಾಗುತ್ತಿದ್ದು. ರೈಲ್ವೆ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಈ ಕುರಿತು ಪಶ್ಚಿಮ ಬಂಗಾಳದ ಸಿಎಂ  ಮಮತಾ ಬ್ಯಾನರ್ಜಿ ಅವರು  ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು,  , ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು.

ಕಾಂಚನಜುಂಗಾ ಎಕ್ಸ್‌ ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಬರೆದಿದ್ದಾರೆ.

Key words: Goods train, collides, Many, injured