ಗೂಳಿಹಟ್ಟಿ ಶೇಖರ್ ಅವರಿಗೆ ತಪ್ಪು ಮಾಹಿತಿ ಇದೆ, ಸಂಘಕ್ಕೆ ಬರಲಿ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ.

0
2

ಉಡುಪಿ, ಡಿಸೆಂಬರ್,9,2023(www.justkannada.in):  ಜಾತಿಯ ಕಾರಣಕ್ಕಾಗಿ ನಾಗಪುರದ ಆರ್​ಎಸ್​ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆರೋಪ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರ್ ಎಸ್ ಎಸ್ ಬಗ್ಗೆ ಅವರಿಗೆ ತಪ್ಪು ಮಾಹಿತಿ ಇದೆ. ಅವರು ಸಂಘಕ್ಕೆ ಬರಲಿ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಗೂಳಿಹಟ್ಟಿ ಶೇಖರ್ ಅವರು ಬಿಜೆಪಿಯ ಮುಖಂಡರು, ಮಂತ್ರಿಯಾಗಿದ್ದರು. ಆರ್ ​ಎಸ್​ ಎಸ್ ಶಾಖೆಗೆ ಹೋದವರು ಈ ರೀತಿ ಮಾತನಾಡಲು ಸಾಧ್ಯವಿಲ್ಲ. ಎಲ್ಲ ವರ್ಗದವರು ಒಟ್ಟಾಗಿ ಇರಬೇಕು ಅನ್ನೋದು ಸಂಘದ ಆಶಯವಾಗಿದೆ. ಗೂಳಿಹಟ್ಟಿ ಶೇಖರ್ ಅವರಿಗೆ ತಪ್ಪು ಮಾಹಿತಿ ಇದೆ, ಹೀಗಾಗಿ ಸಂಘಕ್ಕೆ ಬರಲಿ ಎಂದರು.

ಹಿರಿಯ ನಟಿ ಲೀಲಾವತಿ ನಿಧನದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಚಿತ್ರರಂಗದ ಹಿರಿ ತಲೆ, ಶ್ರೇಷ್ಠ ಕಲಾವಿದೆ ಲೀಲಾವತಿ ನಮ್ಮನ್ನು ಅಗಲಿದ್ದಾರೆ. ಬೆಂಗಳೂರಿನಲ್ಲೇ ನೆಲೆಸಿದ್ದ ಲೀಲಾವತಿ ಚಿತ್ರರಂಗಕ್ಕೆ ಅಪಾರ ಸೇವೆ ನೀಡಿದ್ದರು. ಸಮಾಜ ಸೇವೆ, ಪ್ರಾಣಿಗಳ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವಿನೋದ್ ರಾಜ್, ಕುಟುಂಬಕ್ಕೆ ದೇವರು ದುಃಖ ಸಹಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.

Key words: Goolihatti Shekhar – wrong- information-RRS – Union Minister -Shobha Karandhlaje