Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ: ಇಂದೇ ಗ್ಯಾರಂಟಿ ಯೋಜನೆ ಜಾರಿಗೆ-ಸಿಎಂ ಸಿದ್ಧರಾಮಯ್ಯ ಭರವಸೆ.

ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ: ಇಂದೇ ಗ್ಯಾರಂಟಿ ಯೋಜನೆ ಜಾರಿಗೆ-ಸಿಎಂ ಸಿದ್ಧರಾಮಯ್ಯ ಭರವಸೆ.

ಬೆಂಗಳೂರು,ಮೇ,20,2023(www.justkannada.in): ರಾಜ್ಯದ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ನಡೆಸುತ್ತೇವೆ. ಇಂದೇ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುತ್ತೇವೆ ಎಂದು ನೂತನ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದರು.

ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ಧರಾಮಯ್ಯ,  ಜನರ ಆಶೀರ್ವಾದದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಗೆ ಸಿಕ್ಕಿರುವ ಜಯ ಕನ್ನಡಿಗರಿಗೆ ಸಿಕ್ಕಿರುವ ಜಯ. ರಾಜ್ಯದ ಸಾಹಿತಿಗಳು ಚಿಂತಕರು ಕಾಂಗ್ರೆಸ್ ಪರ ಇದ್ದರು. ಎಲ್ಲರ ಸಹಕಾರದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಭಾರತ್ ಜೋಡೋ ಯಾತ್ರೆ ಮೂಲಕ ಪ್ರಚಾರ ಆರಂಭವಾಗಿತ್ತು.  ರಾಷ್ಟ್ರದ ನಾಯಕರುಗಳು ಸಾಹಿತಿಗಳು ಚಿಂತಕರು ಎಲ್ಲರೂ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದರು.

ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ಮಾಡುತ್ತೇವೆ.  ಇವತ್ತೇ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ. ಮೊದಲ ಸಂಪುಟ ಸಭೆಯಲ್ಲೇ ಅನುಮೋದನೆ ನೀಡುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ  ಜನರಿಗೆ ಕೊಟ್ಟ ಭರವಸೆಯನ್ನ ಇಂದೇ ಈಡೇರಿಸುತ್ತೇವೆ ಎಂದು ಹೇಳಿದರು.

Key words: Governance – expectations – people – Guarantee -scheme -implemented -CM Siddaramaiah