ಇಂದು ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ.

ಬೆಂಗಳೂರು,ಡಿಸೆಂಬರ್,26,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಯಂತೆ 4 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದ್ದು ಇದೀಗ ಇಂದು 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ ನೀಡಲಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ 11.30ಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಯೋಜನೆಯಡಿ ಪದವೀಧರರಿಗೆ 3000, ಡಿಪ್ಲೋಮಾ ಪದವೀಧರರಿಗೆ 1500 ರೂ ಮಾಸಿಕ ಭತ್ಯೆ ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಪದವೀಧರರಿಗೆ ಈ ಅವಕಾಶವಿದ್ದು, ಸೇವಾಸಿಂಧು, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎರಡು ವರ್ಷಗಳ ಕಾಲ ರಾಜ್ಯ ಸರ್ಕಾರ ಯುವನಿಧಿ ಭತ್ಯೆ ನೀಡಲಿದೆ. ಕೆಲಸ ಸಿಕ್ಕ ತಕ್ಷಣ ಯುವನಿಧಿ ಯೋಜನೆ ಹಣ ಸ್ಥಗಿತಗೊಳ್ಳಲಿದೆ.

Key words: Government- 5th Guarantee –yuvanidhi-launched -today.