ಗ್ರಾಹಕರಿಗೆ ಶಾಕ್: ನಂದಿನಿ ಹಾಲು ಮತ್ತು ಮೊಸರಿನ ದರ ಹೆಚ್ಚಳಕ್ಕೆ ಸರ್ಕಾರ  ಒಪ್ಪಿಗೆ…

ಬೆಂಗಳೂರು,ಜ,30,2020(www.justkannada.in):  ರೈತರಿಗೆ ಬಂಪರ್ ಮತ್ತು ಗ್ರಾಹಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದೆ.

ಪ್ರತಿಲೀಟರ್ ಹಾಲಿನ ದರ 2 ರೂಪಾಯಿ ಹಾಗೂ ಮೊಸರಿನ ದರ 2 ರೂ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಪರಿಷ್ಕೃತ ದರ ಫೆಬ್ರವರಿ 1 ರಿಂದ ಜಾರಿಗೆ ಬರಲಿದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್ ಗೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತೀ ಲೀಟರ್ ಗೆ ಎರಡರಿಂದ ಮೂರು ರೂ ಹೆಚ್ಚಳ ಪ್ರಸ್ತಾವನೆ ಸಲ್ಲಿಸಿದ್ದವು. ಈ ಸಂಬಂಧ ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ 2 ರೂ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ. 2 ರೂ ಪೈಕಿ 60ರಿಂದ 70 ಪೈಸೆ ರೈತರಿಗೆ ಮೀಸಲಿಡಲು ನಿರ್ಧರಿಸಿದೆ.

Key words: government -agreed – increase – rates -milk