ಮೈಸೂರಿನ ಈ ಗ್ರಾಮಪಂಚಾಯಿತಿಗಳನ್ನ ಮೇಲ್ದರ್ಜೆಗೇರಿಸಿ ಸರ್ಕಾರ ಘೋಷಣೆ….

ಮೈಸೂರು,ನವೆಂಬರ್, 12,2020(www.justkannada.in): ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿ ಮತ್ತು ನಗರಸಭೆಗಳಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಘೋಷಣೆ ಮಾಡಿದೆ.kannada-journalist-media-fourth-estate-under-loss

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ, ಮೈಸೂರು ನಗರದ ಶ್ರೀರಾಂಪುರ, ರಮ್ಮನಹಳ್ಳಿ, ಬೋಗಾದಿಯನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ. ಇದರ ಜೊತೆಗೆ ಹೂಟಗಳ್ಳಿ ಪಟ್ಟಣ ಪಂಚಾಯಿತಿಯನ್ನು ನಗರಸಭೆಯಾಗಿ ಕೂಡ ಮೇಲ್ದರ್ಜೆಗೇರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಇನ್ನು ಇದಕ್ಕಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡರ ಹೋರಾಟ ಫಲ ನೀಡಿದೆ.Government- announces - upgrading - Gram Panchayats - Mysore.

ಗ್ರಾಮ ಪಂಚಾಯತಿಗಳನ್ನ ಮೇಲ್ದರ್ಜೆಗೇರಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಹಕರಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಮತ್ತು ವಸತಿ ವಿ. ಸೋಮಣ್ಣ ಗೆ ಸಂಸದ ಪ್ರತಾಪ್‌ಸಿಂಹ ಅಭಿನಂದನೆ ಸಲ್ಲಿಸಿದರು.

Key words: Government- announces – upgrading – Gram Panchayats – Mysore.