ನಾವು ನುಡಿದಂತೆ ನಡೆಯುತ್ತೇವೆ: ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ-ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಜುಲೈ,7,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಂದು ಬಜೆಟ್ ಮಂಡನೆಯಾಗಲಿದ್ದು, ಕೆಲವೇ ಕ್ಷಣಗಳಲ್ಲಿ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಆಯವ್ಯಯ ಮಂಡಿಸಲಿದ್ದಾರೆ.

ಬಜೆಟ್​ ಗೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ಮಾಡಲಾಗುತ್ತಿದೆ. ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಾವು ನುಡಿದಂತೆ ನಡೆಯುತ್ತೇವೆ. ಜನರಿಗೆ ಕೊಟ್ಟ ಮಾತನ್ನ ಉಳಿಸಿಕೊಳ್ಳುತ್ತೇವೆ. ವಿಪಕ್ಷಗಳ ಸಲಹೆಯನ್ನ ಸ್ವೀಕರಿಸುತ್ತೇವೆ. ವಿಪಕ್ಷಗಳು ನಮ್ಮ ಗ್ಯಾರಂಟಿ ನೋಡಿ ಸಲಹೆಗಳನ್ನ ಕೊಡ್ತಿದ್ದಾರೆ. ವಿಪಕ್ಷಗಳ ಸಲಹೆಗಳನ್ನ ಸ್ವೀಕರಿಸುತ್ತೇವೆ ಎಂದರು.

ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಬಜೆಟ್ ನಲ್ಲಿ 5 ಗ್ಯಾರಂಟಿಗಳ ಜಾರಿ ಮಾಡುತ್ತೇವೆ.  ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ ಜನಪರ  ಆಯವ್ಯಯ ಮಂಡನೆಯಾಗಲಿದೆ.  ಸಿದ್ಧರಾಮಯ್ಯ ಉತ್ತಮ ಬಜೆಟ್ ಮಂಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Government –budget-DCM -DK Shivakumar.