Thursday, August 13, 2026

BDA Apartments

Home Crime ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಂಡ್ಯ, ಸೆಪ್ಟೆಂಬರ್ 30,2024 (www.justkannada.in): ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್​ ರಸ್ತೆಗೆ ತೆರಳುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ

ಘಟನೆಯ ವೇಳೆ ಬಸ್ ನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಹೊರ ತೆಗೆದು ಹತ್ತಿರವೇ ಇದ್ದ ಸಾಂಜೋ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ‌ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Key words: Government bus, accident, mandya, injured