ಸರ್ಕಾರಿ ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ದುರ್ಮರಣ.

ಕಲಬುರ್ಗಿ,ಜನವರಿ,12,2024(www.justkannada.in): ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದಲಿಂಗಯ್ಯ ಹಾಗೂ ಅವರ ಸಹೋದರನ ಮಗ 8 ವರ್ಷದ ಸಂಕೇತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Government bus –bike- collision- two- death.