Wednesday, September 16, 2026

BDA Apartments

ಸರ್ಕಾರಿ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ: ಇಬ್ಬರು ಮಕ್ಕಳು ಸಾವು BDA JK_Adv BDA Adv
Home Crime ಸರ್ಕಾರಿ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ: ಇಬ್ಬರು ಮಕ್ಕಳು ಸಾವು

ಸರ್ಕಾರಿ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ: ಇಬ್ಬರು ಮಕ್ಕಳು ಸಾವು

ರಾಯಚೂರು,ಸೆಪ್ಟಂಬರ್,5,2024 (www.justkannada.in):  ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

ಕಪಗಲ್ ಬಳಿ  ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟು 30 ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯ ತೀವ್ರತೆಗೆ  ಮೂವರು ಮಕ್ಕಳ ಕಾಲುಗಳು ಕಟ್ ಆಗಿದೆ ಎನ್ನಲಾಗಿದೆ.

ಮಾನ್ವಿ ಹೊರ ವಲಯದ ಲೊಯೊಲ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.  ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  government bus, school bus, Collision, Two children, death