ದರೋಡೆಕೋರರ ರಕ್ಷಣೆಗೆ ನಿಂತ ಸರ್ಕಾರ- ಮಾಜಿ ಸಿಎಂ  ಹೆಚ್​ ಡಿ ಕುಮಾರಸ್ವಾಮಿ ವಾಗ್ದಾಳಿ.

ಬೆಂಗಳೂರು.ನವೆಂಬರ್,24,2023(www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಈ ಕುರಿತು ಇಂದು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇದೆ. ಈ ಮೂಲಕ ದರೋಡೆಕೋರರ ರಕ್ಷಣೆಗೆ ನಿಂತಿದೆ.  ಕೋರ್ಟ್​​ನಲ್ಲಿ ಏನು ನಿರ್ಧಾರ ಆಗುತ್ತೆಂದು ನೋಡಿ ಮಾತಾಡುತ್ತೇನೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್​​ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಅನ್ನೋ ದುರಹಂಕಾರ ಎಂದು ವಾಗ್ದಾಳಿ ನಡೆಸಿದರು.

Key words:  government- defense- robbers- Former CM -HD Kumaraswamy