ಬೆಂಗಳೂರು,ಮಾರ್ಚ್,10,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಖಾಲಿ ಹುದ್ದೆಗಳ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಒಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಇಳಿದಿದ್ದಾರೆ . ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆಗೆ ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆಯಿಂದ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Key words: Government doctors, strike, CM, meeting







