ನಾಳೆಯಿಂದ ಅಂತರಾಜ್ಯ ಬಸ್ ಸಂಚಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್.

ಬೆಂಗಳೂರು,ಜೂನ್,21,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಮಾಡಿದ್ದು ಕೆಎಸ್ ಆರ್ ಟಿಸಿ ಬಸ್ ಸಂಚಾರ ಸೇರಿ ಹಲವು ವಿನಾಯಿತಿಗಳನ್ನ ನೀಡಿದೆ.jk

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸುಮಾರು ಒಂದುವರೆ ತಿಂಗಳಿನಿಂದ ಬಂದ್ ಆಗಿದ್ದ ಬಸ್ ಸಂಚಾರ ಇಂದಿನಿಂದ ಮೈಸೂರು ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಆರಂಭವಾಗಿದೆ. ಇದೀಗ ರಾಜ್ಯ ಸರ್ಕಾರ ಅಂತರಾಜ್ಯ ಬಸ್ ಸಂಚಾರಕ್ಕೂ ಗ್ರೀನ್ ಸಿಗ್ನಲ್ ನೀಡಿದೆ.

ನಾಳೆಯಿಂದ ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ಬಸ್ ಓಡಾಟ ನಡೆಸಲಿದೆ. ಕೋವಿಡ್ ನಿಯಮ ಅನುಸರಿಸಿ ಶೇ.50 ರಷ್ಟು ಪ್ರಯಾಣಿಕರು ಮಾತ್ರ ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Key words: Government- green signal – interstate -bus – tomorrow.