ಐಎಂಎ ವಂಚನೆ ಪ್ರಕರಣದಲ್ಲಿ ಸರ್ಕಾರವೇ ಭಾಗಿ:  ಸಿಬಿಐಗೆ ವಹಿಸದಿದ್ದರೇ ಹೋರಾಟ- ಶಾಸಕ ಅಶ್ವಥ್ ನಾರಾಯಣ್ ಎಚ್ಚರಿಕೆ…

ಬೆಂಗಳೂರು,ಜೂ,24,2019(www.justkannada.in): ಐಎಂಎ ಪ್ರಕರಣದಲ್ಲಿ ಹಲವಾರು ರಾಜಕೀಯ ಮುಖಂಡರು ಭಾಗಿಯಾಗಿದ್ದಾರೆ. ಹೀಗಾಗಿ ಐಎಂಎ ವಂಚನೆ ಪ್ರಕರಣ ಸಿಬಿಐಗೆ  ವಹಿಸಬೇಕು ಇಲ್ಲಿದ್ದರೇ ಹೋರಾಟ ಮಾಡುವುದಾಗಿ ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಮಲ್ಲೇಶ್ವರ ಬಿಜೆಪಿ ಶಾಸಕ ಡಾ. ಸಿ ಎನ್ ಅಶ್ವಥ್ ನಾರಾಯಣ್, ಐಎಂಎ ಪ್ರಕರಣದಲ್ಲಿ ಹಲವಾರು ರಾಜಕೀಯ ಮುಖಂಡರು ಭಾಗಿಯಾಗಿದ್ದಾರೆ. ಇದು ಇನ್ವೆಸ್ಟಮೆಂಟ್ ಸ್ಕೀಮ್. ಮನ್ಸೂರ್ ಖಾನ್ ಜನರ ಹಣವನ್ನ ದರೋಡೆ ಮಾಡಿದ್ದಾನೆ. ಇದರಿಂದ ಅಮಾಯಕ ಮುಸ್ಲಿಂ ಜನ ಮೋಸ ಹೋಗಿದ್ದಾರೆ. ಹಣ ದೋಚಿದ ನಾಯಕರನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ಸರ್ಕಾರವೇ ಈ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಪ್ರಕರಣವನ್ನ ತಕ್ಷಣ ಸಿಬಿಐಗೆ ವಹಿಸಬೇಕು. ಸರ್ಕಾರ ಸಿಬಿಐಗೆ ವಹಿಸದಿದ್ದರೆ ಹೋರಾಟ ಮಾಡಿತ್ತೇವೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚಿಂತನೆ ನಡೆಸುತ್ತೇವೆ. ಸರ್ಕಾರ ರಕ್ಷಣೆ ಮಾಡಲು ಬಯಸಿರುವ ಕೆಲವರಿಗೆ ಬಿಸಿ ಮುಟ್ಟಿಸಬೇಕಾಗಿದೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಶಾರದಾ ಚಿಟ್ ಫಂಡ್ ಮಾದರಿಯಲ್ಲಿಯೇ ಇಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆ. ಆದ್ದರಿಂದ ಸಿಬಿಐ ತನಿಖೆ ಆಗಬೇಕು ಎಂದು ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದರು.

Key words:  government – involved – IMA -fraud –case-MLA-Ashhwath Narayan