ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ: ಸದನದಲ್ಲಿ ನಾವು ಮತ್ತು ಜೆಡಿಎಸ್ ಜಂಟಿ ಹೋರಾಟ-ವಿಪಕ್ಷ ನಾಯಕ ಆರ್.ಅಶೋಕ್.  

ಬೆಳಗಾವಿ,ಡಿಸೆಂಬರ್,4,2023(www.justkannada.in): ಸರ್ಕಾರ ಬರಪರಿಹಾರ ವಿಚಾರದಲ್ಲಿ ಮೊಸಳೆ ಕಣ್ಣೀರು ಹಾಕುತ್ತಿದೆ. ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರೈತರ ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೊಸಳೆ ಕಣ್ಣೀರು ಹಾಕುತ್ತಿದೆ.  ಕನ್ನಡಿದ ದುಡ್ಡನ್ನು  ತೆಗೆದುಕೊಂಡು ಹೋಗಿ ಅಲ್ಲಿ ಜಾಹೀರಾತು ನೀಡುತ್ತಿದ್ದಾರೆ. ನಾವು ಮತ್ತು ಜೆಡಿಎಸ್ ಸದನದಲ್ಲಿ ಜಂಟಿಯಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

Key words: Government – not- yet -taken off- Opposition Leader -R. Ashok