2021-22ನೇ ಸಾಲಿಗೂ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವಂತೆ ರಾಜ್ಯದ ವಿವಿಗಳಿಗೆ ಸರ್ಕಾರ ಆದೇಶ.

ಬೆಂಗಳೂರು,ಅಕ್ಟೋಬರ್,8,2021(www.justkannada.in): ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು 2021-22ನೇ ಸಾಲಿಗೂ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. , ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಸರಣೆಯಿಂದ ಉಂಟಾಗಿರುವ ವಿಷಮ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 2020-21ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಒಂದು ದಿನದ ಮಟ್ಟಿಗೆ ಬಿಡುಗಡೆಗೊಳಿಸಿ, 2021-22 ನೇ ಶೈಕ್ಷಣಿಕ ಸಾಲಿಗೂ ಸದರಿ ಅತಿಥಿ ಉಪನ್ಯಾಸಕರ ಸೇವೆಯನ್ನು ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತೊಂದು ವರ್ಷಕ್ಕೆ ಒಂದು ಬಾರಿಯ ಕ್ರಮವಾಗಿ ಮಾತ್ರ ನಿಯಮಾನುಸಾರ ಮುಂದುವರೆಸುವಂತೆ ರಾಜ್ಯದ ವಿವಿಗಳಿಗೆ ಸೂಚಿಸಿದ್ದಾರೆ. covid-dead-body-cancels-license-order-state-government

Key words: government -ordered –university-continue -guest lecturers -2021-22