Sunday, August 23, 2026

BDA Apartments

Home Front Page ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ- ಸಿಎಂ ಸಿದ್ದರಾಮಯ್ಯ

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ, 17, 2024 (www.justkannada.in):  ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸ್ವೀಕರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿಂದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ ಎಂದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: government, programs, people, CM Siddaramaiah