ಸರ್ಕಾರಿ ನೌಕರರ ಮುಷ್ಕರಕ್ಕೆ ಸರ್ಕಾರವೇ ಕಾರಣ- ಮಾಜಿ ಸಿಎಂ ಹೆಚ್.ಡಿಕೆ ಕಿಡಿ.

ಚಿಕ್ಕಮಗಳೂರು,ಫೆಬ್ರವರಿ,28,2023(www.justkannada.in): 7ನೇ ವೇತನ ಆಯೋಗ ಮತ್ತು ಒಪಿಎಸ್  ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರವೇ ಕಾರಣ ಮತ್ತು ಹೊಣೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,ನಾಳೆಯಿಂದ ಸರ್ಕಾರಿ ನೌಕರರು ಮುಷ್ಕರ ಆರಂಭಿಸಲು ನಿರ್ಧರಿಸಿರುವುದು ಸರ್ಕಾರದ ಸ್ವಯಂಕೃತ ಅಪರಾಧ. 7 ನೇ ವೇತನ ಆಯೋಗ ರಚಿಸಿದ ಬಳಿಕ ಅದು ನೀಡಿದ ಶಿಫಾರಸ್ಸುಗಳನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಬಜೆಟ್ ಮಂಡಿಸುವಾಗ ಘೋಷಣೆ ಮಾಡಬೇಕಿತ್ತು ಮತ್ತು ಅದಕ್ಕಾಗಿ ಹಣ ಮೀಸಲಿಡಬೇಕಿತ್ತು.

ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೆ ಮಾಡದೆ, ಅಸ್ಪಷ್ಟ ಉತ್ತರಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ಕೋಪಗೊಂಡಿರುವ ಸರ್ಕಾರಿ ನೌಕರರು ಮುಷ್ಕರ ಹೂಡಲು ನಿರ್ಧರಿಸಿದ್ದಾರೆ ಎಂದು ಹೆಚ್.ಡಿಕೆ ಹೇಳಿದರು.

Key words: Government – reason – strike -government employees- Former CM- HD Kumaraswamy