Sunday, August 23, 2026

BDA Apartments

Home Front Page ಮುಗಿಯಿತು ಬೇಸಿಗೆ ರಜೆ: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭ

ಮುಗಿಯಿತು ಬೇಸಿಗೆ ರಜೆ: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭ

ಬೆಂಗಳೂರು, ಮೇ 31, 2023 (www.justkannada.in): ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ.

2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ತರಗತಿಗಳು ಶುರುವಾಗಿವೆ.

ಅಂದಹಾಗೆ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಮೊದಲ ದಿನ ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆ ಆರಂಭಿಸಬೇಕೆಂದು ತಿಳಿಸಲಾಗಿದೆ.

ಇಷ್ಟು ದಿನ ಬೇಸಿಗೆ ರಜೆ ಮೂಡನಲ್ಲಿದ್ದ ಮಕ್ಕಳು ಇಂದಿನಿಂದ ಶಾಲೆಗೆ ಹಾಜರಾಗುತ್ತಿದ್ದು, ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಂದಿನಂತೆ ಚಟುವಟಿಕೆಗಳು ಆರಂಭವಾಗಲಿವೆ.