Tuesday, September 22, 2026

BDA Apartments

Home Front Page ಸರ್ಕಾರ ಸಂತ್ರಸ್ತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ- ಕೇಂದ್ರ ಸಚಿವ ಹೆಚ್.ಡಿಕೆ ಕಿಡಿ

ಸರ್ಕಾರ ಸಂತ್ರಸ್ತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ- ಕೇಂದ್ರ ಸಚಿವ ಹೆಚ್.ಡಿಕೆ ಕಿಡಿ

ಉತ್ತರ ಕನ್ನಡ, ಜುಲೈ, 20, 2024 (www.justkannada.in): ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ಸಂತ್ರಸ್ತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಶಿರೂರು ಗುಡ್ಡಕುಸಿತದ ಸ್ಥಳಕ್ಕೆ ಭೇಟಿ ನೀಡಿ  ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ನಾನು 3 ದಿನಗಳ ಹಿಂದೆಯೇ ಬರಬೇಕಿತ್ತು ಆದರೆ ಆಗಲಿಲ್ಲ.  ನಾನು ದೆಹಲಿಯಲ್ಲಿದ್ದರೂ ನನ್ನ ಮನಸ್ಸು ಇಲ್ಲೇ ಇತ್ತು ರಾಜ್ಯದಲ್ಲಿ ಮಳೆಯಿಂದಾಗಿ ಸಾಕಷ್ಟು ಸಮಸ್ಯೆಯಾಗಿದೆ  ಉತ್ತಕನ್ನಡ ಜಿಲ್ಲೆ ಶಿರೂರಿನಲ್ಲಿ  ಗುಡ್ಡುಕುಸಿದು 7 ಜನರು ಸಾವನ್ನಪ್ಪಿದ್ದಾರೆ. ಇಂದು ಉತ್ತರ ಕನ್ನಡ ಪ್ರವಾಸ ಮಾಡುತ್ತೇನೆ ಎಂದರು.ಸರ್ಕಾರ ಸಂತ್ರಸ್ತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ hdk

ಸರ್ಕಾರ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು.  ಆದರೆ ಸಂತ್ರಸ್ತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಇಷ್ಟು ದೊಡ್ಡ ಘಟನೆಯಾದರೂ ಕ್ಯಾರೆ ಎಂದಿಲ್ಲ. ನಾವು ಕರ್ನಾಟಕಕ್ಕೆ ಬರುವುದನ್ನ ಕಾಂಗ್ರೆಸ್ ಸಹಿಸಲ್ಲ ಎಂದು ಹೆಚ್.ಡಿಕೆ ಕಿಡಿಕಾರಿದರು.

Key words: government, shirur, Hill collapse- Union Minister, HDK