ಕಬ್ಬು ಬೆಳೆಗಾಗರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲದ ಸರ್ಕಾರಕ್ಕೆ ಬೆಳಗಾವಿ ಅಧಿವೇಶನ ನಡೆಸುವ ನೈತಿಕತೆ ಇಲ್ಲ-ಕುರುಬೂರು ಶಾಂತಕುಮಾರ್

 

ಬೆಂಗಳೂರು,ಡಿಸೆಂಬರ್,12,(www.justkannada.in): ರಾಜ್ಯದ 50 ರಷ್ಟು ಕಬ್ಬು ಬೆಳೆಯುವ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳ ಕಬ್ಬು ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲದ ಸರ್ಕಾರಕ್ಕೆ ಬೆಳಗಾವಿ ಅಧಿವೇಶನ ನಡೆಸುವ ನೈತಿಕತೆ ಇಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.

ಕಬ್ಬು ಬೆಳೆಗಾರರ ನಿರಂತರ ಧರಣಿ 21ನೇ ದಿನಕ್ಕೆ ಕಾಲಿಟ್ಟಿದ್ದು  ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್, ರಾಜ್ಯದ 50ರಷ್ಟು ಕಬ್ಬು ಬೆಳೆಯುವ ಜಿಲ್ಲೆಗಳಾದ ಬೆಳಗಾವಿ ಬಾಗಲಕೋಟೆ ರೈತರ ಕಬ್ಬುದರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲದ ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ನಾಟಕ ಏಕೆ, ಸಕ್ಕರೆ ಕಾರ್ಖಾನೆಗಳು  ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚ  ಲಗಾಣಿ, ಹಿಂದಿನ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ ಸುಲಿಗೆ ಮಾಡುತ್ತಿದ್ದಾರೆ, ಇದನ್ನು ಪ್ರಶ್ನಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲವೇ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಸರ್ಕಾರದ ತೆರಿಗೆ ಹಣದಿಂದ ಹೆಚ್ಚುವರಿ  ಮಾಡಲಿ ಎಂದು ಆಗ್ರಹಿಸಿದರು.

ಸಣ್ಣಪುಟ್ಟ ತಪ್ಪುಗಳಿಗೆ ಜನರನ್ನ ಜೈಲಿಗೆ ಕಳಿಸುವ ಸರ್ಕಾರಕ್ಕೆ ರೈತರಿಗೆ ಹಣ ಪಾವತಿ ಮೋಸ, ತೂಕದಲ್ಲಿ ಮೋಸ, ಇಳುವರಿಯಲ್ಲಿ ಮೋಸ ಮಾಡುವ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಯಾಕೆ ಮೂಕದಮ್ಮೆ ದಾಖಲಿಸುತ್ತಿಲ್ಲ ಎಂದು ದಾವಣಗೆರೆ ಜಿಲ್ಲೆ ರೈತ ಮುಖಂಡ ಅಂಜನಪ್ಪ ಪೂಜಾರ, ಮುರುಗೇಂದ್ರಯ್ಯ ಮಾತನಾಡಿದರು

ಹಳಿಯಾಳದ ಕುಮಾರ್ ಬುಬಾಟಿ, ಬರಡನಪುರ ನಾಗರಾಜ್, ಬೆಳಗಾವಿ ಗುರುಸಿದ್ದಪ್ಪ ಕೋಟಗಿ, ಲಕ್ಷ್ಮಿ ,ಮಹಾಂತೇಶ್ ಜಮಖಂಡಿ ಉಪಸ್ಥಿತರಿದ್ದರು.

Key words:  government that- cannot -solve – problem – sugarcane-Kuruburu Shanthakumar