Wednesday, August 12, 2026

BDA Apartments

Home Front Page ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸದಂತೆ ನೀಡಲಾಗಿದ್ದ ಸುತ್ತೋಲೆ...

ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸದಂತೆ ನೀಡಲಾಗಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ.

ಬೆಂಗಳೂರು,ಡಿಸೆಂಬರ್,31,2022(www.justkannada.in): ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸದಂತೆ ಸೂಚನೆ  ನೀಡಲಾಗಿದ್ದ ಸುತ್ತೋಲೆಯನ್ನ ಸರ್ಕಾರ ಹಿಂಪಡೆದಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ  ಸರ್ಕಾರದ ಉಪ ಕಾರ್ಯದರ್ಶಿ ಉಮಾ ವರದಯ್ಯ,  ದಿನಾಂಕ: 18.11.2022ರ ಸುತ್ತೋಲೆ ಸಂಖ್ಯೆ: ಸಿಆಸುಇ 240 ಸೆನೆನಿ 2022 ರಲ್ಲಿ ಎಲ್ಲಾ ನೇರ ನೇಮಕಾತಿ ಮತ್ತು ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸದಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಸದರಿ ದಿನಾಂಕ: 18.11.2022ರ ಸುತ್ತೋಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.

ಮೇಲ್ಕಂಡ ಸೂಚನೆಗಳು ಎಲ್ಲಾ ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು/ ಸಾರ್ವಜನಿಕ ಉದ್ದಿಮೆ/ ಆಯೋಗ/ ನಿಗಮ ಮಂಡಳಿಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಗೂ ಸಹ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Key words: government – withdrawn – organizing- departmental -promotion -committee meeting – direct recruitment