ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡಿದೆ : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಅಕ್ಟೋಬರ್,2020(www.justkannada.in) : ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಕರಣ ಬೇಗ ಪತ್ತೆಯಾದರೆ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.jk-logo-justkannada-logo

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಸೋಂಕಿತರು ಪರಿಸ್ಥಿತಿ ತೀವ್ರಗೊಂಡ ನಂತರ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿತ್ತು. ಈ ಸಮಸ್ಯೆಯನ್ನು ಮನಗಂಡ ಸರ್ಕಾರ ಪರೀಕ್ಷೆ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದರು.

ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸ್ವತಃ ಪ್ರಧಾನಮಂತ್ರಿಯವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳು ಸಹ ಕರ್ನಾಟಕದ ಮಾದರಿಯನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ.

ಲಾಕ್‌ಡೌನ್ ಸಡಿಲಗೊಳಿಸಿದ ನಂತರ ಪರಿಸ್ಥಿತಿ ಸ್ವಲ್ಪ ಕೆಟ್ಟಿತ್ತು. ಆದರೆ, ಈಗ ಮತ್ತೆ ನಿಯಂತ್ರಣಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೆಲ್ಲ ಜನರ ಸಹಕಾರದಿಂದ ಸಾಧ್ಯವಾಗಿದೆ. ಈ ಹೋರಾಟ ಇಲ್ಲಿಗೆ ಮುಗಿದಿಲ್ಲ. ಸ್ಪಷ್ಟವಾದ ಲಸಿಕೆ ಸಿಗುವ ವರೆಗೂ ನಮ್ಮ ಹೋರಾಟ ಮುಂದುವರಿಯಬೇಕು ಎಂದು ತಿಳಿಸಿದರು.

key words : government-made-every-effort-control-Kovid-Minister S.T. Somashekhar