ಕೈಗಾರಿಕಾ ತರಬೇತಿ ಕೇಂದ್ರಗಳ ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಣೆಗೆ ಸರಕಾರ ನಿರ್ಧಾರ

ಬೆಂಗಳೂರು, ಸೆಪ್ಟೆಂಬರ್ 05, 2021 (www.justkannada.in): ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ 13,061 ವಿದ್ಯಾರ್ಥಿಗಳಿಗೆ ಸಲಕರಣೆಗಳನ್ನು ಒಳಗೊಂಡ ‘ಟೂಲ್‌ ಕಿಟ್‌’ ವಿತರಣೆಗೆ ಸರಕಾರ ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯಲ್ಲಿ 13,061 ವಿದ್ಯಾರ್ಥಿಗಳಿಗೆ ಸಲಕರಣೆಗಳನ್ನು ಒಳಗೊಂಡ ‘ಟೂಲ್‌ ಕಿಟ್‌’ ವಿತರಣೆಗೆ ಅಂಗೀಕಾರ ಸಿಕ್ಕಿದೆ.

ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ ಅನುದಾನದಲ್ಲಿ 17.18 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಟೂಲ್‌ ಕಿಟ್‌ ವಿತರಿಸಲಾಗುವುದು ಎಂದು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

key words: Government’s decision to distribute tool kit to students of industrial training centers