ಬೆಂಗಳೂರು,ಜನವರಿ,22,2026 (www.justkannada.in): ಇಂದಿನಿಂದ ಆರಂಭವಾಗುತ್ತಿರುವ ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಜರಾಗಿದ್ದಾರೆ.
ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಂಬಂಧ ರಾಜ್ಯ ಸರ್ಕಾರ ಇಂದಿನಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದೆ. ಈ ಮಧ್ಯೆ ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನಕ್ಕೆ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದರು.
ನಂತರ ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಇದೀಗ ವಿಧಾನಮಂಡಲ ವಿಶೇಷ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಜರಾಗಿದ್ದು ಇದೀಗ ಒಂದೇ ಸಾಲಿನಲ್ಲಿ ಕೆಲ ಅಂಶಗಳನ್ನ ಮಾತ್ರ ಉಲ್ಲೇಖಿಸಿ ಭಾಷಣ ಮುಗಿಸಿ ತೆರಳಿದ್ದಾರೆ.
Key words: Governor, Thawar Chand Gehlot, attends, joint session







