ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಸಚಿವ ಬಸವರಾಜ ಬೊಮ್ಮಾಯಿ ಕೊರೋನಾ ಟೆಸ್ಟ್ ವರದಿ ಬಹಿರಂಗ…

ಬೆಂಗಳೂರು,ಆ,3,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಹಿನ್ನೆಲೆ, ಪ್ರಾಥಮಿಕ ಸಂಪರ್ಕದಲ್ಲಿದ್ದ ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಕೋವಿಡ್ ಟೆಸ್ಟ್ ವರದಿ ಬಂದಿದೆ.jk-logo-justkannada-logo

ರಾಜ್ಯಪಾಲರಾದ ವಜುಬಾಯಿ ವಾಲಾ ಮತ್ತು ಸಚಿವ ಬಸವರಾಜ ಬೊಮ್ಮಾಯಿ ಅವರ ಕೋವಿಡ್ ವರದಿ ನೆಗೆಟಿವ್ ಎಂದು ಬಂದಿದೆ. ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ಮಧ್ಯಾಹ್ನ ಆಂಟ್ಯಿಜನ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿ ನೆಗೆಟಿವ್ ಎಂದು ಬಂದಿದೆ.Governor Vajubhai Wala –Minister- Basavaraja Bommai- Corona -report

ಇನ್ನು ಹೋಂ ಕ್ವಾರಂಟೈನ್ ನಲ್ಲಿರುವ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಆರ್. ಟಿ ನಗರ ನಿವಾಸದಲ್ಲಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್  ಮಾಡಲಾಗಿತ್ತು. ಇದೀಗ ಅವರ ಕೋವಿಡ್ ವರದಿ ಬಂದಿದ್ದು ನೆಗೆಟಿವ್ ಆಗಿದೆ.

Key words: Governor Vajubhai Wala –Minister- Basavaraja Bommai- Corona -report